Psalms 29:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; ಕಾಡಿನ ಮರಗಳು ಬರಿದಾಗುತ್ತವೆ. ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.
Kannada BSI Bible 2016
ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಗರ್ಜನೆಗೆ ಗರ್ಭದ ಜಿಂಕೆಗಳು ಈಯುತ್ತವೆ; ಕಾಡಿನ ಮರಗಳು ಬರೀದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು - ಎಷ್ಟೋ ಪ್ರಭಾವ! ಎನ್ನುತ್ತಾರೆ.
Kannada Bible (KNCL) BSI 2016
ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.