Psalms 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ.
Kannada BSI Bible 2016
ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೆಹೋವನಿಗೆ ಮೊರೆಯಿಡುವಾಗ ಆತನು ತನ್ನ ಪರಿಶುದ್ಧಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.
Kannada Bible (KNCL) BSI 2016
ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.