Psalms 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
Kannada BSI Bible 2016
ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
Kannada Bible (KNCL) BSI 2016
ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.