Psalms 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ.
Kannada BSI Bible 2016
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.
Kannada Bible (KNCL) BSI 2016
ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.