Psalms 30:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
Kannada BSI Bible 2016
ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವದಕ್ಕೆ ಅವಕಾಶಕೊಡದೆ ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
Kannada Bible (KNCL) BSI 2016
ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.