Psalms 30:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ; ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.
Kannada BSI Bible 2016
ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಗೊಡದೆ ಬದುಕಿಸಿದಿಯಲ್ಲಾ.
Kannada Bible (KNCL) BSI 2016
ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ I ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.