Psalms 31:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜೀವಿತವು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ.
Kannada BSI Bible 2016
ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಯಿತು; ನನ್ನ ಎಲುಬುಗಳು ಸವೆದುಹೋಗಿವೆ.
Kannada Bible (KNCL) BSI 2016
ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ.