Psalms 31:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
Kannada BSI Bible 2016
ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
Kannada Bible (KNCL) BSI 2016
ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.