Psalms 31:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
Kannada BSI Bible 2016
ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
Kannada Bible (KNCL) BSI 2016
ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.