Psalms 31:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.
Kannada BSI Bible 2016
ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.
Kannada Bible (KNCL) BSI 2016
ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.