Psalms 31:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
Kannada BSI Bible 2016
ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ; ಆದದರಿಂದ ನಿನ್ನ ಹೆಸರಿನ ನಿವಿುತ್ತ ದಾರಿತೋರಿಸಿ ನನ್ನನ್ನು ನಡಿಸು.
Kannada Bible (KNCL) BSI 2016
ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.