Psalms 31:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
Kannada BSI Bible 2016
ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಕೆಯುಳ್ಳ ದೇವರೇ, ನನ್ನನ್ನು ವಿಮೋಚಿಸಿದ್ದೀ.
Kannada Bible (KNCL) BSI 2016
ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ.