Psalms 31:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ. ಹೊಟ್ಟೆಯೂ ನೋಯುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
Kannada BSI Bible 2016
ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣುಗುಡ್ಡು ಸೇದಿಕೊಂಡಿದೆ; ದೇಹಾತ್ಮಗಳು ಕುಗ್ಗಿಹೋದವು.
Kannada Bible (KNCL) BSI 2016
ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.