Psalms 32:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ.
Kannada BSI Bible 2016
ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.
Kannada Bible (KNCL) BSI 2016
ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.