Psalms 32:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
Kannada BSI Bible 2016
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].
Kannada Bible (KNCL) BSI 2016
ಪ್ರಭು ಇಂತೆಂದನು: “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.