Psalms 33:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
Kannada BSI Bible 2016
ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ.
Kannada Bible (KNCL) BSI 2016
ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.