Psalms 34:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
Kannada BSI Bible 2016
ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಮೇಲಿಗೂ ಕಡಿಮೆಯಿಲ್ಲ.
Kannada Bible (KNCL) BSI 2016
ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.