Psalms 34:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ರಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
Kannada BSI Bible 2016
ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
Kannada Bible (KNCL) BSI 2016
ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.