Psalms 34:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
Kannada BSI Bible 2016
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವದಿಲ್ಲ.
Kannada Bible (KNCL) BSI 2016
ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ; ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.