Psalms 35:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
Kannada BSI Bible 2016
ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.
Kannada Bible (KNCL) BSI 2016
“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, “ನಿಮ್ಮ ಹಾಗೆ ಯಾರು ಇದ್ದಾರೆ? ಬಡವನನ್ನು ಅವನಿಗಿಂತ ಬಲಿಷ್ಠನಿಂದ ಕಾಪಾಡುತ್ತೀರಿ ದರಿದ್ರನನ್ನೂ, ಕೊರತೆಯುಳ್ಳವನನ್ನೂ ಸುಲಿದುಕೊಳ್ಳುವವನಿಂದ ಬಿಡಿಸುತ್ತೀರಿ,” ಎಂದು ನನ್ನ ಪೂರ್ಣ ಪ್ರಾಣವೇ ಹೇಳುವುದು.