Psalms 35:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
Kannada BSI Bible 2016
ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
Kannada Bible (KNCL) BSI 2016
ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.