Psalms 35:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ. ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.
Kannada BSI Bible 2016
ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನನಗೆ ಆಪತ್ತು ಬಂದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಅಕಾರಣವಾಗಿ ಈ ಭ್ರಷ್ಟರು ನನಗೆ ವಿರೋಧವಾಗಿ ಕೂಡಿಕೊಂಡು ಸೂರೆಮಾಡುವದನ್ನು ಬಿಡಲೇ ಇಲ್ಲ.
Kannada Bible (KNCL) BSI 2016
ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಎಡವಿದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಹೌದು, ದೂಷಕರು ನನಗೆ ತಿಳಿಯದೆ ನನ್ನ ವಿರೋಧವಾಗಿ ಕೂಡಿಕೊಂಡರು. ಅವರು ನನ್ನನ್ನು ದೂಷಿಸುವುದನ್ನು ನಿಲ್ಲಿಸಲೇ ಇಲ್ಲ.