Psalms 35:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದ ಕೊಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
Kannada BSI Bible 2016
ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ನುಂಗಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
Kannada Bible (KNCL) BSI 2016
ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.