Psalms 35:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.
Kannada BSI Bible 2016
ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.
Kannada Bible (KNCL) BSI 2016
ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.