Psalms 35:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
Kannada BSI Bible 2016
ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
Kannada Bible (KNCL) BSI 2016
ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.