Psalms 36:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
Kannada BSI Bible 2016
ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಅವನನ್ನು ವಂಚಿಸಿ - ನಿನ್ನ ತಪ್ಪು ಬೈಲಿಗೆ ಬರುವದಿಲ್ಲ. ಹೇಯವಾಗುವದಿಲ್ಲ ಎಂದು ಊದಿಬಿಡುತ್ತದೆ.
Kannada Bible (KNCL) BSI 2016
“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.