Psalms 36:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
Kannada BSI Bible 2016
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.
Kannada Bible (KNCL) BSI 2016
ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.