Psalms 36:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
Kannada BSI Bible 2016
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.
Kannada Bible (KNCL) BSI 2016
ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.