Psalms 36:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
Kannada BSI Bible 2016
ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
Kannada Bible (KNCL) BSI 2016
ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.