Psalms 37:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
Kannada BSI Bible 2016
ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
Kannada Bible (KNCL) BSI 2016
ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.