Psalms 37:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
Kannada BSI Bible 2016
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.
Kannada Bible (KNCL) BSI 2016
ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.