Psalms 37:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ನೀತಿವಂತರನ್ನು ತೊರೆದುಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
Kannada BSI Bible 2016
ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಹೋವನು ಅವನನ್ನು ಸಿಕ್ಕಗೊಡಿಸುವದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವದಿಲ್ಲ.
Kannada Bible (KNCL) BSI 2016
ಪ್ರಭು ಬಿಡನವನನು ದುಷ್ಟ ಶಕ್ತಿಯ ವಶಕ್ಕೆ I ಗುರಿಪಡಿಸನು ನ್ಯಾಯಸ್ಥಾನದ ಶಿಕ್ಷೆಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.