Psalms 37:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
Kannada BSI Bible 2016
ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
Kannada Bible (KNCL) BSI 2016
ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.