Psalms 38:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
Kannada BSI Bible 2016
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
Kannada Bible (KNCL) BSI 2016
ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.