Psalms 39:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಎಂದುಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.
Kannada BSI Bible 2016
ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.
Kannada Bible (KNCL) BSI 2016
ನಾ ಇಂತೆಂದುಕೊಂಡೆ: “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು.