Psalms 39:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ.
Kannada BSI Bible 2016
ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.
Kannada Bible (KNCL) BSI 2016
ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.