Psalms 39:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.
Kannada BSI Bible 2016
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ ಪರದೇಶದವನೂ ಆಗಿದ್ದೇನಲ್ಲಾ.
Kannada Bible (KNCL) BSI 2016
ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಗೆ ಕಿವಿಗೊಡಿರಿ; ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; ನಾನೂ ಪ್ರವಾಸಿಯಾಗಿದ್ದೇನೆ.