Psalms 39:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬಹುಕೋಪಗೊಂಡಿದ್ದೆ. ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. ಆಗ ನಾನು ಬಾಯಿತೆರೆದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,
Kannada BSI Bible 2016
ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯುರಿಯಿತು. ಆಗ ನಾನು ಬಾಯಿಬಿಟ್ಟು -
Kannada Bible (KNCL) BSI 2016
ಎದೆಯ ತಾಪ ಹೆಚ್ಚಿತು, ಚಿಂತೆ ಕಾವೇರಿತು I ಆಗತಾನೆ ಬಾಯ್ತೆರೆದೆ ನಾನಿಂತೆಂದು: II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೃದಯವು ಸಂತಾಪದಿಂದ ಕಾವೇರಿತು. ನಾನು ಧ್ಯಾನವು ಬೆಂಕಿಯಂತೆ ಉರಿಯಿತು. ಕೊನೆಗೆ ನಾನು ಬಾಯಿಬಿಟ್ಟು ಮಾತನಾಡಿದೆನು: