Psalms 39:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ.
Kannada BSI Bible 2016
ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ.
Kannada Bible (KNCL) BSI 2016
ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.