Psalms 39:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
Kannada BSI Bible 2016
ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.
Kannada Bible (KNCL) BSI 2016
ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.