Psalms 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
Kannada BSI Bible 2016
ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಇಕ್ಕಟ್ಟಿನಿಂದ ಬಿಡಿಸಿ ಇಂಬಾದ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಅಂಗೀಕರಿಸು.
Kannada Bible (KNCL) BSI 2016
ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.