Psalms 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ?
Kannada BSI Bible 2016
ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹನೀಯರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸಿ ನನ್ನನ್ನು ಅವಮಾನ ಪಡಿಸುವಿರಿ? ಯಾಕೆ ನಿರರ್ಥಕವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ.
Kannada Bible (KNCL) BSI 2016
ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?