Psalms 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
Kannada BSI Bible 2016
ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
Kannada Bible (KNCL) BSI 2016
“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.