Psalms 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
Kannada BSI Bible 2016
ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿರ್ಭಯವಾಗಿರುವದರಿಂದ ಮಲಗಿಕೊಂಡು ಕೂಡಲೆ ನಿದ್ದೆ ಮಾಡುವೆನು; ಯಾಕಂದರೆ ಯೆಹೋವನೇ, ನಾನು ಯಾವ ಅಪಾಯವೂ ಇಲ್ಲದೆ ಸುರಕ್ಷಿತನಾಗಿರುವಂತೆ ನೀನು ಕಾಪಾಡುತ್ತೀ.
Kannada Bible (KNCL) BSI 2016
ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.