Psalms 40:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
Kannada BSI Bible 2016
ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನೀತಿಸಾಧನೆಯನ್ನು ಮರೆಮಾಜಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
Kannada Bible (KNCL) BSI 2016
ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು.