Psalms 40:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.
Kannada BSI Bible 2016
ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು ಯೆಹೋವನಿಗೆ ಸ್ತೋತ್ರವೆಂದು ಯಾವಾಗಲೂ ಹೇಳುವವರಾಗಲಿ.
Kannada Bible (KNCL) BSI 2016
ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ; ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ಯೆಹೋವ ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.