Psalms 40:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
Kannada BSI Bible 2016
ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
Kannada Bible (KNCL) BSI 2016
ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು. ಕೆಸರಿನ ಮಣ್ಣಿನಿಂದ ಎಬ್ಬಿಸಿದರು. ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ, ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.