Psalms 40:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
Kannada BSI Bible 2016
ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
Kannada Bible (KNCL) BSI 2016
ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು.