Psalms 40:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
Kannada BSI Bible 2016
ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು ಧಾರಾಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
Kannada Bible (KNCL) BSI 2016
ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು; ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು ನೀವೇ ತಿಳಿದಿದ್ದೀರಿ.