Psalms 41:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
Kannada BSI Bible 2016
ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!
Kannada Bible (KNCL) BSI 2016
ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.